ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ-ಐಜಿಪಿ ಒಪ್ಪಿಗೆ

Prasthutha|

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ವೈಯಕ್ತಿಕ ಕಾರಣ ನೀಡಿ ತಮ್ಮ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಇದೀಗ ಡಿಜಿ ಮತ್ತು ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. 

ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಿದ್ದರು. ಪತ್ರಕ್ಕೆ ಇದೀಗ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಕಡತ ಕ್ಲಿಯರೆನ್ಸ್ ಗಾಗಿ ರವಾನಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದರೆ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಪಡೆದಂತಾಗಲಿದೆ.

- Advertisement -