ಫೇಕ್ ನ್ಯೂಸ್ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್

Prasthutha|

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಹೇಳಿದರು.

- Advertisement -


ನಗರ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಸಭೆ ಮುಕ್ತಾಯ ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ, ಟ್ರಾಫಿಕ್ ಸುಧಾರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.


ಸಾರ್ವಜನಿಕರ ಜತೆ ಪೊಲೀಸರು ನಡವಳಿಕೆ ಉತ್ತಮವಾಗಿರಬೇಕು. ದೂರುಗಳು ಬಂದಾಗ ಕೂಡಲೇ ಪರಿಹರಿಸುವ ಕೆಲಸವಾಗಬೇಕು. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ನಿರ್ದೇಶನ ನೀಡಲಾಗಿದೆ. ಪೊಲೀಸ್ ಠಾಣೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.