ಮುಂಬೈ: ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಣೆ ಮತ್ತು ಪರಿಹಾರವನ್ನು ಒದಗಿಸದ ಹಿನ್ನೆಲೆಯಲ್ಲಿ ಏರ್ ಇಂಡಿಯಾಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 10 ಲಕ್ಷ ರೂ. ದಂಡ ವಿಧಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದರ ಬಗ್ಗೆ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು DGCA ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಮುಂದಿನ ಕ್ರಮ ಜರುಗಿಸುವ ಮೊದಲೇ ಪ್ರಯಾಣಿಕರಿಗೆ ಪರಿಹಾರವನ್ನು ನೀಡಲು ನೀತಿ ರೂಪಿಸುವಂತೆ ಏರ್ ಇಂಡಿಯಾಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಅದು ಹೇಳಿದೆ.