ಧರ್ಮಸ್ಥಳ: ಸಿದ್ದರಾಮಯ್ಯ, ಡಿಕೆಶಿ ಎದುರು ಜೈ ಮೋದಿ, ಜೈ ಶ್ರೀರಾಂ ಘೋಷಣೆ

Prasthutha|

ಧರ್ಮಸ್ಥಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ ಸಾಲಿನಲ್ಲಿ ನಿಂತಿದ್ದವರಲ್ಲಿ ಕೆಲವರು ಮೋದಿ ಪರ ಘೋಷಣೆ ಮೊಳಗಿಸಿದ್ದಾರೆ.

- Advertisement -

ಸಿಎಂ ಹಾಗೂ ಡಿಸಿಎಂ ಕಾಣುತ್ತಿದ್ದಂತೆ ಸರತಿ ಸಾಲಿನಲ್ಲಿ ನಿಂತಿದ್ದ ಕೆಲ ಭಕ್ತರು ಮೋದಿ ಮೋದಿ ಎಂದು ಕೂಗಿಕೊಂಡರು. ಮೋದಿ ಕಿ ಜೈ, ಜೈ ಶ್ರೀರಾಮ್ ಅಂತ ಕೂಗಿದ್ದಾರೆ. ಅಲ್ಲದೆ, ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂದು ಘೋಷಣೆ ಕೂಗಿದ್ದಾರೆ.

ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಮತ್ತು ಡಿಸಿಎಂ ವಿಶೇಷ ಪೂಜೆ ಸಲ್ಲಿಸಿದರು. ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ವೇಳೆ ಡಿಕೆಶಿಯವರು ಹೆಗ್ಗಡೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ನಂತರ ಹೆಗ್ಗಡೆಯವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.

- Advertisement -

ನಂತರ ಮಾತನಾಡಿದ ಡಿಕೆ ಶಿವಕುಮಾರ್, ಸಿಎಂ, ವೆಂಕಟೇಶ್, ಬೈರತಿ ಸುರೇಶ್ ಜೊತೆಗೆ ಕ್ಷೇತ್ರಕ್ಕೆ ಆಗಮಿಸಿದ್ದೇವೆ. ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ರಾಜ್ಯದಲ್ಲಿ ಮಳೆ ಮತ್ತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಬೆಳೆ ಚೆನ್ನಾಗಿ ಆಗಲಿ, ರಾಜ್ಯದಲ್ಲಿ ಶಾಂತಿ ನೆಲೆಗೊಳ್ಳಲಿ ಸಿಎಂ, ನಾವೆಲ್ಲಾ ಪ್ರಾರ್ಥನೆ ಮಾಡಿದ್ದೇವೆ ಎಂದರು.

Join Whatsapp
Exit mobile version