Home ಟಾಪ್ ಸುದ್ದಿಗಳು ಧರ್ಮಸ್ಥಳ | ಯುದ್ಧಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದೆ: ಡಿಕೆ ಶಿವಕುಮಾರ್

ಧರ್ಮಸ್ಥಳ | ಯುದ್ಧಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದೆ: ಡಿಕೆ ಶಿವಕುಮಾರ್

ಧರ್ಮಸ್ಥಳ: ಯಾವಾಗಲೂ ಧರ್ಮ ಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಇಲ್ಲಿಗೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.


ಧರ್ಮಸ್ಥಳ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದರು.

Join Whatsapp
Exit mobile version