ಧರ್ಮಸ್ಥಳ | ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ

Prasthutha|

ಬೆಳ್ತಂಗಡಿ: ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆನ್ನಲಾಗಿದೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.