ಧರ್ಮಸ್ಥಳ | ಸ್ಯಾಟಲೈಟ್‌ ಫೋನ್‌ ಕರೆ: ಪೊಲೀಸರಿಂದ ಅರಣ್ಯದಲ್ಲಿ ಶೋಧ

Prasthutha|

- Advertisement -

ಬೆಳ್ತಂಗಡಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ಸ್ಯಾಟಲೈಟ್‌ ಫೋನ್‌ ಕರೆ ಹೋಗಿರುವುದು ಬೆಳಕಿಗೆ ಬಂದಿದ್ದು, ಧರ್ಮಸ್ಥಳ ಪೊಲೀಸರು ಬೆಂದ್ರಾಳ
ಅರಣ್ಯದಲ್ಲಿ ಶೋಧ ನಡೆಸುತ್ತಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಡಿ ಮತ್ತು ತಂಡ ತೋಟತ್ತಾಡಿ ಗ್ರಾಮದ ಬಾರೆಮನೆ ನಿವಾಸಿಗಳಾದ ರುಕ್ಮಯ ಗೌಡ ಮನೆ ಮತ್ತು ಚೆಲುವಮ್ಮ ಎಂಬುವವರ ಮನೆಯಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಬೆಂದ್ರಾಳ ಸುತ್ತಮುತ್ತಲಿನ ಸುಮಾರು 5 ಕಿ.ಮೀ ಅರಣ್ಯ ಪ್ರದೇಶದೊಳಗೆ ಹುಡುಕಾಟ ನಡೆಸಿ ನಂತರ ಸ್ಯಾಟಲೈಟ್‌ ಕರೆ ಹೋದ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

Join Whatsapp