Home ಟಾಪ್ ಸುದ್ದಿಗಳು ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ತೀವ್ರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು
ಅವಿನಾಶ್, ನಂದೀಪ್ ಹಾಗೂ ಅಕ್ಷತ್ ಉಪ್ಪಿನಂಗಡಿ ಬಂಧಿತ ಆರೋಪಿಗಳು.

ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಆಶಿಕ್ ಮೇಲೆ ಸಂಘಪರಿವಾರಕ್ಕೆ ಸೇರಿದ ಯುವಕರು ನಿನಗೆ ಹಿಂದೂ ಯುವತಿಯರೇ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ಮುಹಮ್ಮದ್ ಆಶಿಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಆಶೀಕ್ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಐಪಿಸಿ ಸೆಕ್ಷನ್ 143, 147, 341, 323, 307, 395, 153(ಎ), 504, 506ರ ಜೊತೆಗೆ 149ರ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಅದರಂತೆ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Join Whatsapp
Exit mobile version