ಧರ್ಮಸ್ಥಳ | ಕಾನೂನಿನ ಬಗ್ಗೆ ಗೌರವ, ದೇವರ ಮೇಲೆ ನಂಬಿಕೆ ಇದೆ: ಹೆಚ್.ಡಿ ರೇವಣ್ಣ

Prasthutha|

ಮಂಗಳೂರು: ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

- Advertisement -

ಮಾಜಿ ಸಚಿವ ಹೆಚ್.ಡಿ ರೇವಣ್ಣ ಟೆಂಪಲ್ ರನ್ ಮುಂದುವರಿದಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟೆಯಾಗಿ ಮಾತುಕತೆ ನಡೆಸಿದರು.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version