Home ಕರಾವಳಿ ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ: ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ: ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಮಂಗಳೂರು: 2012ರಲ್ಲಿ ಹಂತಕರ ಕುಕೃತ್ಯಕ್ಕೆ ಬಲಿಯಾದ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್ ಮುಂದಾಗಿದೆ ಎಂದು ತಿಳಿದು ಬಂದಿದೆ.


ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.

2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ದುರುಳರು ಅಪಹರಿಸಿ, ಅತ್ಯಾಚಾರಗೈದು, ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಅಮಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು (ಜೂನ್) 16ರಂದು ಆತ ನಿರಪರಾಧಿಯೆಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.

Join Whatsapp
Exit mobile version