ಧರ್ಮಸ್ಥಳದಿಂದ ಸ್ಯಾಟ್ ಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ

Prasthutha|

- Advertisement -

ಬೆಳ್ತಂಗಡಿ: ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ನೀಡಿದ್ದು, ಕರೆ ಹೋಗಿರುವುದು ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಂದ್ರಾಳ ಪ್ರದೇಶದ ಅರಣ್ಯದಲ್ಲಿ ಸ್ಫೋಟದ ಶಬ್ದ ಕೇಳಿಸಿದೆ ಎಂಬ ವದಂತಿ ಹರಡುತ್ತಿದೆ. ಈ ಬಗ್ಗೆಯೂ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಅತ್ಯಂತ ಹೆಚ್ಚಾಗಿದೆ. ಅವುಗಳನ್ನು ಓಡಿಸಲು ಸ್ಥಳೀಯರು ಪಟಾಕಿಗಳನ್ನು ಉಪಯೋಗಿಸುತ್ತಿದ್ದಾರೆ. ಅದರ ಶಬ್ದವೇ ಆಗಿರಬಹುದು ಎಂಬ ಮಾಹಿತಿ ಪರಿಶೀಲನೆಯ ಸಂದರ್ಭದಲ್ಲಿ ಕಂಡುಬಂದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Join Whatsapp