ಧರ್ಮಸ್ಥಳದಲ್ಲಿ ವಿಮಾನ ನಿಲ್ದಾಣ: ಸಚಿವ ಸೋಮಣ್ಣ

Prasthutha|

- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗವನ್ನು ಗುರುತಿಸಲು ಮುಖ್ಯಮಂತ್ರಿ ಹಾಗೂ ಇತರ ಇಲಾಖೆಗಳೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಬಸವ ವಸತಿ ಮತ್ತು ಅಂಬೇಡ್ಕರ್ ವಸತಿ ಯೋಜನೆಗಳ 1500 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಎಟಿಆರ್ ಮತ್ತು ವಿಮಾನ ನಿಲ್ದಾಣದಲ್ಲಿ 10 ರಿಂದ 12 ಆಸನಗಳ ವಿಮಾನಗಳು ಇಳಿಯಬಹುದು, ಜೊತೆಗೆ ನಾಲ್ಕು ಹೆಲಿಪ್ಯಾಡ್ ಗಳನ್ನು ಧರ್ಮಸ್ಥಳಕ್ಕೆ ಯೋಜಿಸಲಾಗಿದೆ. ಶೀಘ್ರದಲ್ಲೇ ಡಿಪಿಆರ್ ತಯಾರಿಸಿ ಸಂಪುಟದ ಅನುಮೋದನೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು.



Join Whatsapp