Home ಟಾಪ್ ಸುದ್ದಿಗಳು ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಪಾರ್ಥೀವ ಶರೀರಕ್ಕೆ ಅಂತಿಮ ನಮನ; ಸಕಲ ಸರಕಾರಿ ಗೌರವ

ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಪಾರ್ಥೀವ ಶರೀರಕ್ಕೆ ಅಂತಿಮ ನಮನ; ಸಕಲ ಸರಕಾರಿ ಗೌರವ

ಚಿಕ್ಕಮಗಳೂರು : ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖರು ಪಡೆದರು. ಜಿಲ್ಲೆಯ ಕಡೂರಿನ ಸಖರಾಯಪಟ್ಟಣದ ತೋಟದಲ್ಲಿ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ.

ಸಖರಾಯಪಟ್ಟಣದ ಕಾಲೇಜಿ ಆವರಣದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿತ್ತು. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರುಗಳಾದ ಸಿ.ಟಿ. ರವಿ, ರಾಜೇಗೌಡ, ಬೆಳ್ಳಿ ಪ್ರಕಾಶ್, ಕೆ. ಮಾಧುಸ್ವಾಮಿ ಸೇರಿದಂತೆ ಅಪಾರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಪಾರ್ಥೀವ ಶರೀರಕ್ಕೆ ಪುಷ್ಪಗುಚ್ಛ ಸಮರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಿರಿಯ ಮುಖಂಡರನ್ನು ಕಳೆದುಕೊಂಡುದುದಕ್ಕೆ ಕಣ್ಣೀರಿಟ್ಟರು.

ಧರ್ಮೇಗೌಡ ಅವರ ಸ್ನೇಹಿತರೂ, ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಧರ್ಮೇಗೌಡರ ಡೆತ್ ನೋಟ್ ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಅಗಲಿದ ನಾಯಕನಿಗೆ ಸಕಲ ಸರಕಾರಿ ಗೌರವ ಸಮರ್ಪಣೆ ಮಾಡಲಾಯಿತು.

 

Join Whatsapp
Exit mobile version