ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ

Prasthutha|

ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ಕಡೂರು ತಾಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಾರಿನಲ್ಲಿಯೇ ಚಾಲಕನನ್ನು ಇರುವಂತೆ ಹೇಳಿದ್ದ ಧರ್ಮೇಗೌಡ. ರೈಲ್ವೆ ಹಳಿಯತ್ತ ಸಾಗಿ ಆತ್ಮಹತ್ಯೆಗ ಶರಣಾಗಿದ್ದಾರೆ. ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಭೇಟಿ ನೀಡಿದ್ದಾರೆ. ಶಿವಮೊಗ್ಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.

Join Whatsapp