18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್ : ಡಿಎಚ್ಒ ಮನವಿ

Prasthutha|

ಹಾಸನ: ದೇಶದ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಅಝಾದಿ ಕಾ ಅಮೃತ ಮಹೋತ್ಸವ್’ ಪ್ರಯುಕ್ತ ಭಾರತ ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಮುಂಜಾಗ್ರತಾ ಲಸಿಕೆ (3ನೇ ಲಸಿಕೆ)  ನೀಡುವ ಕಾರ್ಯಕ್ರಮವನ್ನು ಶುಕ್ರವಾರದಿಂದ ಆರಂಭಿಸಿದ್ದು, ಈ ಮುನ್ನೆಚ್ಚರಿಕಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರೆಲ್ಲರೂ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕೋರಿದ್ದಾರೆ.

- Advertisement -

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸೆಪ್ಟೆಂಬರ್ 30 ರ ವರೆಗೆ(75 ದಿನಗಳ ಕಾಲ) ಲಸಿಕಾ ಅಭಿಯಾನ ನಡೆಯಲಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ, ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಅವಕಾಶವನ್ನು 18 ವರ್ಷ ಮೇಲ್ಪಟ್ಟವರು ಬಳಸಿಕೊಳ್ಳುವಂತಾಗಬೇಕು ಎಂದು ಮನವಿ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ 2 ನೇ ಡೋಸ್  ಪಡೆದು 6 ತಿಂಗಳು ಪೂರ್ಣಗೊಂಡಿರುವ 18 ವರ್ಷ ಮೇಲ್ಪಟ್ಟ 2,89,883 ಫಲಾನುಭವಿಗಳು ಮುಂಜಾಗ್ರತಾ ಲಸಿಕೆ ಪಡೆಯಲು ಬಾಕಿ ಇದೆ. ಇವರು ಸಮೀಪದ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ವಿವರಿಸಿದರು.

- Advertisement -

ಬುಧವಾರ ಮತ್ತು ಶುಕ್ರವಾರ ಲಸಿಕಾ ಮೇಳವೂ ಸಹ ನಡೆಯಲಿದ್ದು, ಆ ಸಂದರ್ಭದಲ್ಲಿಯೂ ಸಹ ಮುಂಜಾಗ್ರತಾ ಲಸಿಕೆ ಪಡೆಯಬಹುದಾಗಿದ್ದು, ಲಸಿಕಾ ಯಶಸ್ವಿಗೆ ಸಹಕರಿಸುವಂತೆ ಕೋರಿದರು.

ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ವಿತರರಣೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ. ಕೋವಿಡ್-19 ನಿಯಂತ್ರಣ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಇರುವುದಿಲ್ಲ ಎಂದು ತಿಳಿಸಿದರು.

Join Whatsapp