Home ಟಾಪ್ ಸುದ್ದಿಗಳು ಅಮೆರಿಕ: ಧ್ರುವಿ ಪಟೇಲ್’ಗೆ ಒಲಿದ ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಕಿರೀಟ

ಅಮೆರಿಕ: ಧ್ರುವಿ ಪಟೇಲ್’ಗೆ ಒಲಿದ ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಕಿರೀಟ

ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ಧ್ರುವಿ ಪಟೇಲ್ ಅವರು ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.


ಇತ್ತೀಚೆಗೆ ನ್ಯೂಜೆರ್ಸಿಯ ಎಡಿಸನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರನ್ನು ಘೋಷಿಸಲಾಯಿತು.


ಇದು ನನಗೆ ಜಾಗತಿಕವಾಗಿ ಸಿಕ್ಕ ಮನ್ನಣೆ. ಮಿಸ್ ಇಂಡಿಯಾ ವರ್ಲ್ಡ್ ವೈಡ್ ಗೆಲ್ಲುವುದು ನನಗೆ ಅತ್ಯಂತ ಗೌರವವಾಗಿದೆ. ಇದು ಮಿಸ್ ವರ್ಲ್ಡ್ ಗೂ ಹೆಚ್ಚಿನ ಗೌರವ ಎಂದು ಧ್ರುವಿ ಪಟೇಲ್ ಹೇಳಿದ್ದಾರೆ.


ಗುಜರಾತ್ ಮೂಲದ ಧ್ರುವಿ ಪಟೇಲ್ ಅವರು ಅಮೆರಿಕದಲ್ಲಿ ಕಂಪ್ಯೂಟರ್ ಇನ್ಫರ್ಮೆಷನ್ ಸಿಸ್ಟಮ್ ಪದವಿ ಓದುತ್ತಿದ್ದಾರೆ. ಬಾಲಿವುಡ್ ನಟಿಯಾಗುವ ಅಪೇಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version