Home ಟಾಪ್ ಸುದ್ದಿಗಳು ಉತ್ತರ ಪ್ರದೇಶ: ಹಳಿತಪ್ಪಿದ ದಿಬ್ರುಗಢ ಎಕ್ಸ್’ಪ್ರೆಸ್; ಇಬ್ಬರು ಸಾವು

ಉತ್ತರ ಪ್ರದೇಶ: ಹಳಿತಪ್ಪಿದ ದಿಬ್ರುಗಢ ಎಕ್ಸ್’ಪ್ರೆಸ್; ಇಬ್ಬರು ಸಾವು

ಗೊಂಡಾ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್ ಪ್ರೆಸ್ ನ 15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಧಿಕಾರಿಗಳ ಪ್ರಕಾರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

Join Whatsapp
Exit mobile version