ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಮಾತನಾಡಿದ್ದಾರಾ?: ಮಧು ಬಂಗಾರಪ್ಪ

Prasthutha|

ಮೈಸೂರು: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಬಿಜೆಪಿಯವರು ಮಾತಾನಾಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

- Advertisement -

ತಾನು ತಲೆಕೂದಲು ತೆಗೆಯದ್ದಕ್ಕೆ ವ್ಯಂಗ್ಯ ಮಾಡಿದ ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲವಾದ ಅವರು, ಮೋದಿ ಅವರು ಕೋವಿಡ್ ಸಮಯದಲ್ಲಿ ಗಡ್ಡ ಬಿಟ್ಟಿದ್ರು ಅದನ್ನು ಯಾಕೆ ಪ್ರಶ್ನಿಸಲಿಲ್ಲ? ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡುವುದು ಒಂದು ವಿಷಯವೇ? ನನ್ನ ವಿಚಾರ ಅವರಿಗೆ ಯಾಕೆ? ಕೆಲ ಮಕ್ಕಳು ನಮ್ಮ ಶಿಕ್ಷಣ ಸಚಿವರು ಒಳ್ಳೇ ಸ್ಟೈಲ್ ನಲ್ಲಿದ್ದಾರೆ. ನಮಗೆ ಆ ರೀತಿ ಹೇರ್ ಸ್ಟೈಲ್ ಬಿಡಲು ಅವಕಾಶ ಯಾಕಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.

ನನ್ನ ಹೇರ್ ಸ್ಟೈಲ್ ಬಗ್ಗೆ ನನ್ನ ತಂದೆಗೆ ಬಹಳ ಪ್ರೀತಿ ಇತ್ತು. ನಾನು ಹೇರ್ ಕಟ್ ಮಾಡಿಸಿದ್ದಕ್ಕೆ ಮೂರು ದಿನ ಅವರು ನನ್ನ ಜೊತೆ ಮಾತನಾಡಿರಲಿಲ್ಲ. ನಮ್ಮ ತಂದೆಯೇ ನನಗೆ ಆದರ್ಶ ಹೊರತು ವಿಜಯೇಂದ್ರ ಅಲ್ಲ ಎಂದು ಹೇಳಿದ್ದಾರೆ.



Join Whatsapp