ಶೋಭಾ ಬೆಂಗಳೂರಿಗೆ ಬೆಂಕಿ‌ಹಚ್ಚೊಕೆ ಬಂದಿದ್ದಾರಾ, ಇಲ್ಲ ಬಾಂಬ್ ಇಡೋಕೆ ಬಂದಿದ್ದಾರಾ: ಬಿಜೆಪಿ ಶಾಸಕ ಸೋಮಶೇಖರ್

Prasthutha|

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಗೆ ನನ್ನ ಕ್ಷೇತ್ರ ಬರುತ್ತದೆ. ಡಿ.ಬಿ.ಚಂದ್ರೇಗೌಡ ಸಂಸದರಾಗಿದ್ದರು, ಡಿವಿ ಸದಾನಂದಗೌಡ ಅವರು 10 ವರ್ಷ ಸಂಸದರಾಗಿದ್ದರು. ಒಂದೇ ಒಂದು ಸಣ್ಣ ವ್ಯತ್ಯಾಸವೂ ಆಗಿರಲಿಲ್ಲ. ಆದ್ರೆ, ಇದೀಗ ಯಶವಂತಪುರ ಕ್ಷೇತ್ರಕ್ಕೆ ಹೋಗುವುದಕ್ಕೆ ನಾನೇ ಭಯಪಡುತ್ತಿದ್ದೇನೆ. ಯಾರು ಏನು ಮಾತನಾಡ್ತಾರೋ, ಎತ್ತಿ ಕಟ್ಟುತ್ತಾರೆಂಬ ಭಯವಿದೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಶಾಸಕ ಸೋಮಶೇಖರ್ ಕಿಡಿಕಾರಿದ್ದಾರೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್‌ರೊಂದಿಗೆ ಇಂದು ಬಿಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಮಾತನಾಡಿದರು.

ಇವತ್ತು ಬೆಂಕಿ ಉಂಡೆಯೂ ಮಾತನಾಡ್ತಿದೆ ನನಗೆ ನನ್ನ ರಕ್ಷಣೆಯೇ ಮುಖ್ಯವಾಗಿದೆ. ಪೊಲೀಸ್ ಆಯುಕ್ತರು ಕೇಳಬೇಕಿದೆ. ಇವರು ಬೆಂಕಿ‌ಹಚ್ಚೊಕೆ ಬಂದಿದ್ದಾರಾ? ಇಲ್ಲ ಬಾಂಬ್ ಇಡೋಕೆ ಬಂದಿದ್ದಾರಾ ಗೊತ್ತಿಲ್ಲ. 10 ವರ್ಷಗಳಿಂದ ಶಾಸಕನಾಗಿ, ಜನರ ನಡುವೆ ಕೆಲಸ ಮಾಡುತ್ತಿದ್ದೇನೆ. ಈ ಎಲ್ಲ ಅವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ, ಆದರೆ ಈ ಸಲ ಟಿಕೆಟ್ ಗಿಟ್ಟಿಸಿರುವ ಶೋಭಾ ಕರಂದ್ಲಾಜೆ, ಗೆಲ್ಲುವ ಮೊದಲೇ ಅಸಂಬದ್ಧ ಮತ್ತು ಮತೀಯ ಗಲಾಟೆಗಳಿಗೆ ಉತ್ತೇಜನ ನೀಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

- Advertisement -

ಶೋಭಾ ಕರಂದ್ಲಾಜೆ ವಿರುದ್ಧ ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿ ಅವರು ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರ್ಚ್ 21ರ ಗುರುವಾರ ಎಫ್‌ಐಆರ್ ದಾಖಲಾಗಿದೆ.

Join Whatsapp