Home ಟಾಪ್ ಸುದ್ದಿಗಳು ಬಿಜೆಪಿ ಅಧಿಕಾರದಲ್ಲಿದ್ದಾಗ RSS ಮೇಲಿನ ಕೇಸ್ ವಾಪಸ್ ತೆಗೆದುಕೊಂಡಿದ್ರಲ್ಲಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಅಧಿಕಾರದಲ್ಲಿದ್ದಾಗ RSS ಮೇಲಿನ ಕೇಸ್ ವಾಪಸ್ ತೆಗೆದುಕೊಂಡಿದ್ರಲ್ಲಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಆರ್‌ಎಸ್‌ಎಸ್ ಮೇಲಿನ ಕೇಸ್ ವಾಪಾಸ್ ತೆಗೆದುಕೊಂಡಿದ್ದರಲ್ಲ ಅದು ಏನಂಥೆ? ಎಂದು ಹುಬ್ಬಳ್ಳಿ ಗಲಭೆ ಕೇಸ್ ವಿಚಾರವಾಗಿ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಕೇಸ್ ವಾಪಸ್‌ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಮಾತನಾಡಿದರು. ಬಿಜೆಪಿಯವರು ಯಾವಾಗಲೂ ಹಾಗೇ ವಿರೋಧ ವ್ಯಕ್ತಪಡಿಸುತ್ತಾರೆ. ಪ್ರತಿಭಟನೆ ಬೇಕಾದರೆ ಮಾಡಲಿ, ಕ್ಯಾಬಿನೆಟ್ ಸಬ್ ಕಮಿಟಿಯಿಂದ ತೀರ್ಮಾನ ಆಗಿದ್ದು, ನಂತರ ಕಾನೂನು ಅಡಿಯಲ್ಲಿ ಕೇಸ್ ವಾಪಸ್ ಪಡೆಯಲಾಗಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಆರ್‌ಎಸ್‌ಎಸ್ ಮೇಲಿನ ಕೇಸ್ ವಾಪಾಸ್ ತೆಗೆದುಕೊಂಡಿದ್ದರಲ್ಲ ಅದು ಏನಂಥೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಕೇಂದ್ರದಿಂದ ತೆರಿಗೆ ಪಾಲು ವಿಚಾರವಾಗಿ ಮಾತನಾಡಿ, ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ. ಪದೇ ಪದೇ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆಗುತ್ತಿದೆ. ಉತ್ತರ ಪ್ರದೇಶಕ್ಕೆ ಜಾಸ್ತಿ ಕೊಟ್ಟಿದ್ದಾರೆ. ಕರ್ನಾಟಕದ ಎಂಪಿಗಳು ಈ ಕುರಿತು ಧ್ವನಿ ಎತ್ತಬೇಕು. ಈ ಬಗ್ಗೆ ಬಿಜೆಪಿ ನಾಯಕರು ಮಾತನಾಡಲ್ಲ. ಜೋಶಿ ಸೇರಿದಂತೆ ಯಾರು ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version