ಮಂಡ್ಯ: ಬಿಜೆಪಿ ಸೇರುವ ಬಗ್ಗೆ ಎಲ್ಲಿಯೂ ನಾನು ಹೇಳಿಕೆ ನೀಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮುಖಂಡರನ್ನು ಭೇಟಿಯಾದರೆ ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ತಿಳಿಸಿದರು.
ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ ಎಂದು ಹೇಳಿದರು.