ಶಿವಸೇನಾ ತೊರೆದಿಲ್ಲ: ಬಂಡಾಯ ನಾಯಕ ಏಕನಾಥ್ ಶಿಂಧೆ

Prasthutha|

ಗುವಾಹಟಿ: ಶಿವಸೇನಾ ತೊರೆದಿಲ್ಲ, ಆ ಬಗ್ಗೆ ಯೋಚನೆ ಮಾಡಿಲ್ಲ ಎಂದು ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಶಿಂಧೆ, ‘40 ಶಾಸಕರು ನನ್ನೊಂದಿಗೆ ಇದ್ದಾರೆ. ಇನ್ನೂ 10 ಶಾಸಕರು ಶೀಘ್ರದಲ್ಲೇ ನಮ್ಮನ್ನು ಸೇರಿಕೊಳ್ಳಲಿದ್ದಾರೆ. ನಾನು ಯಾರನ್ನೂ ಟೀಕಿಸುತ್ತಿಲ್ಲ. ದಿವಂಗತ ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಸೇನಾವನ್ನು ಮುಂದುವರಿಸಲು ನಾವು ಉತ್ಸುಕರಾಗಿದ್ದೇವೆ’ ಎಂದು ಸೂರತ್ ನಿಂದ ಶಿಂಧೆ ಮತ್ತು ಬೆಂಬಲಿಗ ಶಾಸಕರು, ಚಾರ್ಟರ್ಡ್ ವಿಮಾನದಲ್ಲಿ ಗುವಾಹಟಿಗೆ ಬಂದಿದ್ದು, ಈ ಹೇಳಿಕೆ ನೀಡಿದ್ದಾರೆ.

‘ನಾವೆಲ್ಲ ಬಾಳಾಸಾಹೇಬ್ ಠಾಕ್ರೆ ಅನುಯಾಯಿಗಳು. ನಾವು ಶಿವಸೇನಾ ತೊರೆದಿಲ್ಲ ಹಾಗೂ ಆ ಬಗ್ಗೆ ಯೋಚಿಸಿಯೂ ಇಲ್ಲ. ಹಿಂದೂ ಎಂದು ಗರ್ವದಿಂದ ಹೇಳಿ ಎಂಬ ಬಾಳಾಸಾಹೇಬ್ ಠಾಕ್ರೆ ಹೇಳಿಕೆಯನ್ನು ನಾನು ನೆನಪಿಸಿಕೊಳ್ಳುತ್ತೇನೆ’ ಎಂದು ಸೂರತ್ನಿಂದ ಹೊರಡುವ ಮುನ್ನ ಶಿಂಧೆ ಹೇಳಿದ್ದರು.

Join Whatsapp