ಬೆಂಗಳೂರು: ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಹೇಳಿಕೆ ನೀಡಿದ್ದ ನಟ ಸುದೀಪ್ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಕಾಶ್ ರೈ ಅವರು, ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಇನ್ನು ಮುಂದೆ ನಿಮ್ಮನ್ನೂ .. ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ಎಂಬ ಸವಾಲನ್ನೂ ಹಾಕಿದ್ದಾರೆ.