ಬೆಳ್ತಂಗಡಿ | ಬೈಕಿಗೆ KSRTC ಬಸ್ ಡಿಕ್ಕಿ : ಅಣ್ಣ-ತಮ್ಮ ಮೃತ್ಯು

Prasthutha|

ಬೆಳ್ತಂಗಡಿ: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿನಡೆದಿದೆ.

- Advertisement -

ಸಿರಾಜ್,ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಇವರು ಬಂಡಾಡ್ ರಝಾಕ್ ಮಾಸ್ಟರ್ ಅವರ ಮಕ್ಕಳು ಎಂದು ತಿಳಿದು ಬಂದಿದೆ.

ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

- Advertisement -

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.




Join Whatsapp