ಲಖಿಂಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಡಿಐಜಿ ಉಪೇಂದ್ರ ಕುಮಾರ್ ಅಗರ್ವಾಲ್ ವರ್ಗಾವಣೆ!

Prasthutha: October 23, 2021

ಲಖ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹಲವಾರು ಜೀವಗಳನ್ನು ಬಲಿ ಪಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ಡಿಐಜಿ ಉಪೇಂದ್ರ ಕುಮಾರ್ ಅಗರ್ವಾಲ್ ವರ್ಗಾವಣೆಯಾದ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಕರಣದ ತನಿಖೆಯ ಮೇಲ್ವಿಚಾರಣೆಯ ಉಸ್ತುವಾರಿಯನ್ನು ಉಪೇಂದ್ರ ಕುಮಾರ್ ವಹಿಸಿದ್ದರು.

ಕೇಂದ್ರ ಸಚಿವ ಅಜಯ್ ಮಿಶ್ರಾ ಸಂಪುಟದಲ್ಲಿ ಇರುವವರೆಗೂ ರೈತರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಉತ್ತರಪ್ರದೇಶ ಸರ್ಕಾರದ ನಡೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.


ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಒಬ್ಬ ಪತ್ರಕರ್ತ ಸೇರಿದಂತೆ ರೈತರನ್ನು ಹತ್ಯೆಗೈದಿದ್ದನು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!