ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದಿಗ್ವಿಜಯ್ ಹೇಳಿಕೆ ವೈಯಕ್ತಿಕ, ಕಾಂಗ್ರೆಸ್ ಒಪ್ಪುವುದಿಲ್ಲ: ರಾಹುಲ್ ಗಾಂಧಿ

Prasthutha|

ನವದೆಹಲಿ: ಮೋದಿ ಸರ್ಕಾರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ ಸಿಂಗ್ ಅವರ ವೈಯಕ್ತಿಕ ಹೇಳಿಕೆಯನ್ನು ತಾವು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -


ಸರ್ಜಿಕಲ್ ಸ್ಟ್ರೈಕ್ ಗಳ ಕುರಿತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಯು ರಕ್ಷಣಾ ಪಡೆಗಳ ನೈತಿಕತೆಯನ್ನು ಕುಗ್ಗಿಸುವಂಥ ಮಾತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.


ದಿಗ್ವಿಜಯ್ ಅವರ ಹೇಳಿಕೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ನಾವು ಅದನ್ನು ಒಪ್ಪುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಕಾಂಗ್ರೆಸ್ನ ಅಧಿಕೃತ ನಿಲುವು. ಅವರು (ಸಶಸ್ತ್ರ ಪಡೆಗಳು) ಯಾವುದೇ ಪುರಾವೆ ಒದಗಿಸಬೇಕಾಗಿಲ್ಲ ಎಂದು ಹೇಳಿದರು.

Join Whatsapp