ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ನಳಿನ್ ಕುಮಾರ್ ಕಟೀಲ್

Prasthutha|

ಬೆಳಗಾವಿ: ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಬಿಜೆಪಿಯಿಂದಲೇ ಕರ್ನಾಟಕ ಕಲ್ಯಾಣವಾಗಿ ಮಾರ್ಪಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಪಾಲಿಕೆ ನೂತನ ಬಿಜೆಪಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ ರಾಜ್ಯದ ಜನರಲ್ಲಿ ಅಭಿಮಾನ, ನಂಬಿಕೆ ಹೆಚ್ಚುತ್ತಿದೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿದ ಮತದಾರ ಪ್ರಭುಗಳಿಗೆ ಪಕ್ಷದಿಂದ ಅಭಿನಂದನೆ. ಪಾಲಿಕೆಯಲ್ಲಿ ಚುಕ್ಕಾಣಿ ಹಿಡಿಯಲು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ನಾಯಕರನ್ನೂ ಅಭಿನಂದಿಸುತ್ತೇವೆ ಎಂದು ಹೇಳಿದರು.

- Advertisement -