ಕೊಚ್ಚಿ: ಮಲಯಾಳಂ ಸಿನಿ ನಟ ದಿಲೀಪ್ ಆರೋಪಿಯಾಗಿರುವ 2017ರ ಬಹುಭಾಷಾ ನಟಿ ಲೈಂಗಿಕ ದೌರ್ಜನ್ಯ ಪ್ರಕರಣದ ಹೆಚ್ಚಿನ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.
ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರು ನಟ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ನೀಡಿದರು.
ನಟಿ ವಿರುದ್ಧ ಸೇಡು ತೀರಿಸಿಕೊಳ್ಳಲು ಆಕೆಯನ್ನು ಅಪಹರಿಸಿದ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ (ಸಿಬಿಐ ವಿಶೇಷ ಸಂಖ್ಯೆ III) ದಿಲೀಪ್ ಮತ್ತು ಅವರ ಸಹಚರರು ವಿಚಾರಣೆ ಎದುರಿಸುತ್ತಿದ್ದಾರೆ.
ಮುಂದಿನ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಮನವಿಗೆ ಸಂಬಂಧಿಸಿದಂತೆ ಹಲವು ದೀರ್ಘ ವಿಚಾರಣೆಗಳನ್ನು ನಡೆಸಿದ್ದ ಹೈಕೋರ್ಟ್ ತನ್ನ ತೀರ್ಪನ್ನು ಫೆಬ್ರವರಿ 24, 2022ರಂದು ಕಾಯ್ದಿರಿಸಿತ್ತು.