Home ಟಾಪ್ ಸುದ್ದಿಗಳು ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಹೋರಾಟವೇ?:...

ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಹೋರಾಟವೇ?: ಬಿಜೆಪಿ ನಾಯಕರಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ರಾಜ್ಯ ಬಿಜೆಪಿ ನಾಯಕರು ಬಿಂಬಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ABVP ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಬಿಟ್ಟಾಗ ಎಲ್ಲಿದ್ದಿರೀ?’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಪ್ರತೀಕ್ ಗೌಡ ಎಂಬ ABVPಯವನೊಬ್ಬ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ BJPಯ ಎಲ್ಲಾ ನಾಯಕರ ನವರಂದ್ರಗಳೂ ಬಂದ್ ಆಗಿತ್ತು. ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?” ಎಂದು ಕಿಡಿಕಾರಿದ್ದಾರೆ.


ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು. ಆದರೆ ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರತೀಕ್ ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ. ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version