ಗ್ಯಾರಂಟಿ ಸ್ಕೀಮ್ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಕ್ರಮ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

Prasthutha|

ಮಂಗಳೂರು: ಗ್ಯಾರಂಟಿ ಸ್ಕೀಮ್ ಅರ್ಜಿ ಸಲ್ಲಿಕೆಗೆ ಹಣ ಪಡೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

- Advertisement -

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಸಮೀಕ್ಷಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಗತಿ ಪರಿಶೀಲನೆ ನಡೆಸಿದರು.

ನೂತನ ಸರಕಾರದ ಗ್ಯಾರಂಟಿ ಸ್ಕೀಮ್‌ಗಳಿಗೆ ಅರ್ಜಿಯೊಂದಕ್ಕೆ 20 ರೂ.ಗಳನ್ನು ಗ್ರಾಮ ವನ್‌ಗೆ ಸರಕಾರವೇ ಪಾವತಿಸುತ್ತದೆ. ಆದರೆ ಅರ್ಜಿದಾರರಿಂದಲೇ 50 ರೂ.ಗಳನ್ನು ಪಡೆಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಗ್ಯಾರಂಟಿ ಸ್ಕೀಮ್ ಅರ್ಜಿ ಸಲ್ಲಿಕೆ ಉಚಿತವಾಗಿದ್ದು, ಅರ್ಜಿದಾರರಿಂದ ಹಣ ಪಡೆಯುವ ಏಜೆನ್ಸಿಗಳನ್ನು ಬ್ಲ್ಯಾಕ್ ಲಿಸ್ಟ್‌ಗೊಳಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್ ವೇದಿಕೆಯಲ್ಲಿದ್ದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಭಾಗಿರಥಿ ಮುರುಳ್ಯ ಹಾಗೂ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Join Whatsapp