‘ಕ್ರಿಮಿನಲ್ ಗಳು ಒಳ್ಳೆಯ ಕೆಲಸ ಮಾಡಲು ಸಾಧ್ಯವೇ?’: ಕೇಂದ್ರ ಸರ್ಕಾರವನ್ನು ಟೀಕಿಸಿದ ದಿನೇಶ್ ಗುಂಡೂರಾವ್

Prasthutha: July 20, 2021

ಬೆಂಗಳೂರು: ಪೆಗಾಸಸ್ ಸ್ಪೈವೇರ್‌ ಮೂಲಕ ಪ್ರತಿಷ್ಟಿತ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡುವ ಕೇಂದ್ರದ ದುಷ್ಟ ಬುದ್ಧಿ ಜಗತ್ತಿನ ಮುಂದೆ ಬೆತ್ತಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೂ ಕಣ್ಗಾವಲು ನಡೆಸಿರುವುದು ಕ್ರಿಮಿನಲ್‌ಗಳು ಮಾಡುವಂತ ಕೆಲಸ. ಕೇಂದ್ರ ಸಂಪುಟದಲ್ಲಿ ಕ್ರಿಮಿನಲ್‌ಗಳೇ ಇರುವಾಗ ಕ್ರಿಮಿನಲ್ ಕೆಲಸವಲ್ಲದೆ ಒಳ್ಳೆ ಕೆಲಸ ಮಾಡಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಸಮರ್ಥ ನಾಯಕನಿಗೆ ಸದಾ ಅಸ್ತಿತ್ವದ ಭಯ ಕಾಡುತ್ತದೆ. ಮೋದಿಯವರಿಗೂ ಈಗ ಅಸ್ತಿತ್ವದ ಭಯವಿದೆ. ಹಾಗಾಗಿ ಪೆಗಾಸಸ್ ಮೂಲಕ ಮುಖ್ಯ ನ್ಯಾಯಮೂರ್ತಿ, ರಾಜಕೀಯ ನಾಯಕರು ಹಾಗೂ ಪತ್ರಕರ್ತರ ಚಲನವಲನಗಳ ಮೇಲೆ ಕಣ್ಗಾವಲು ಇಡುವ ಹೀನ ಕೆಲಸಕ್ಕೆ ಕೈ ಹಾಕಿದ್ದಾರೆ. ಕೇಂದ್ರದ ಈ ಕೃತ್ಯ, ವ್ಯಕ್ತಿಗಳ ಖಾಸಗಿ ಹಕ್ಕಿನ ಉಲ್ಲಂಘನೆಯ ಜೊತೆ ಅಪರಾಧ ಕೂಡ ಹೌದು ಎಂದು ಕಿಡಿ ಕಾರಿದ್ದಾರೆ.

ಕೆಲವರಿಗೆ ಮದ್ದು ಹಾಕುವ ಕೆಟ್ಟ ರೋಗವಿರುತ್ತದೆ. ಅವರಿಗೆ ಮದ್ದು ಹಾಕಲು ಯಾರೂ ಸಿಗದಿದ್ದರೆ ಕೊನೆಗೆ ಮನೆಯವರಿಗೆ ಮದ್ದು ಹಾಕುತ್ತಾರೆ. ನಳಿನ್ ಕುಮಾರ್ ಕಟೀಲ್ ರವರ ಸಿಎಂ ಬದಲಾವಣೆ ಆಡಿಯೋ ಲೀಕ್ ಹಿಂದೆಯೂ ಕೇಂದ್ರದ ಕೈವಾಡವಿರಬಹುದು. ಕಟೀಲ್‌ರವರೇ ನಿಮ್ಮ ಆಡಿಯೋ ಲೀಕ್ ಹಿಂದಿನ ರಹಸ್ಯವೇನು ಎಂಬುದನ್ನು ಒಮ್ಮೆ ಅಮಿತ್ ಶಾ ಬಳಿ ಕೇಳಿ ತಿಳಿದುಕೊಳ್ಳಿ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!