ಸೆಕ್ಸ್ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಜಾರಕಿಹೊಳಿ ವಿರುದ್ಧದ ಕೇಸು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ

Prasthutha|

- Advertisement -

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಜಾರಕಿಹೋಳಿ ಅವರ ವಿರುದ್ಧ ನೀಡಿದ್ದ ದೂರು ಹಿಂಪಡೆದಿದ್ದಾರೆ.

ಈ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಕಲ್ಲಹಳ್ಳಿ ತನ್ನ ವಕೀಲರ ಮೂಲಕ ಪೊಲೀಸ್ ಠಾಣೆಗೆ ಪತ್ರ ಕಳುಹಿಸಿದ್ದಾರೆ. ಕಲ್ಲಹಳ್ಳಿಯವರ ವಕೀಲರು ಈ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಉದ್ಯೋಗ ನೀಡುತ್ತೇನೆಂದು ಮಹಿಳೆಯ ಜತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಕಲ್ಲಹಳ್ಳಿ ದೂರು ನೀಡಿದ್ದರು.

- Advertisement -

ನಂತರ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು.



Join Whatsapp