Home ಟಾಪ್ ಸುದ್ದಿಗಳು ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕುಮಾರ್ ತ್ರಿಪಾಠಿ ನೇಮಕ

ನವದೆಹಲಿ: ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ಏಪ್ರಿಲ್ 30ರಂದು ಸೇವೆಯಿಂದ ನಿವೃತ್ತರಾಗಲಿದ್ದು, ದಿನೇಶ್ ತ್ರಿಪಾಠಿ ಅಂದೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Join Whatsapp
Exit mobile version