ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಏನೂ ಹೇಳುವುದಿಲ್ಲ: ಜೋಶಿ

Prasthutha|

ಹುಬ್ಬಳ್ಳಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದರು.

- Advertisement -

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲಲು ದಿಂಗಾಲೇಶ್ವರ ಸ್ವಾಮೀಜಿಗಳು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಎುತ್ತರಿಸಿದ ಅವರು, ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ನಡೆಯುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.



Join Whatsapp