ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮಿ ಹೇಳಿದ್ದಾರೆ.
ಇಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಮಾಧ್ಯಮಗೋಷ್ಟಿ ನಡೆಸಿ ದಿಂಗಾಲೇಶ್ವರ ಶ್ರೀಗಳು ನಿರ್ಣಯ ಪ್ರಕಟಿಸಿದರು.
“ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ದ್ರೋಹವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಆದರೆ ಮತದಾರರು ನಮ್ಮನ್ನು ಚುನಾವಣೆಗೆ ನಿಲ್ಲಿಸುವ ನಿರ್ಧಾರ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ, ಸ್ವಾರ್ಥ ರಾಜಕಾರಣಿಗಳ ವಿರುದ್ಧ ಸ್ವಾಭಿಮಾನಿ ಧರ್ಮ ಗುರುಗಳು ಮಾಡಿದ ಧರ್ಮ ಯುದ್ಧದ ಘೋಷಣೆ ಇದಾಗಿದೆ. ಧರ್ಮ ಯುದ್ಧವು ಕೇವಲ ಈ ಚುನಾವಣೆಗೆ ಸೀಮಿತವಾಗಿಲ್ಲ, ಜೀವ ಇರುವವರೆಗೂ ಮುಂದುವರೆಯಲಿದೆ, ನೊಂದವರ ಕಷ್ಟಕ್ಕೆ ಸ್ಪಂದಿಸಲು ಈ ನಿರ್ಧಾರ” ಎಂದರು.