ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ: ಬಿ.ಸಿ. ಪಾಟೀಲ್

Prasthutha|

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

- Advertisement -

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಹೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು.ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ  (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪ್ರಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.

- Advertisement -

ಕೃಷಿ ಪದವೀಧರರು 85% ಉಳಿದ 15%  ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ    ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.



Join Whatsapp