ಬೆಂಗಳೂರು, ಜು.29: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ಬಿಜೆಪಿ ನಾಯಕರು ಸಂಪುಟ ರಚನೆಗೆ ಮೊದಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪನವರ ಸಂಪುಟದಲ್ಲಿದ್ದ ಹಿರಿಯ ಮುಖಂಡರ ಭವಿಷ್ಯ ಮತ್ತು ಅವರ ಮುಂದಿನ ನಡೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅದರಲ್ಲಿ ಪ್ರಮುಖವಾಗಿ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪನವರದ್ದು. ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ. ನಾನು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ.
ಇದು ನನ್ನ ವೈಯಕ್ತಿಕ ನಿರ್ಧಾರ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.
ಈಶ್ವರಪ್ಪನವರು ಕೂಡ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಇನ್ನೂ ಪಕ್ಷದಲ್ಲಿ ಬದಲಾವಣೆಗಳು ಆಗಲಿದೆ ಎಂದು ಈಶ್ವರಪ್ಪ ಹೇಳುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.