Home ಟಾಪ್ ಸುದ್ದಿಗಳು ಮುಖ್ಯಮಂತ್ರಿ ಸ್ಥಾನಕ್ಕೆ 2500 ಕೋಟಿ ಹೇಳಿಕೆ: ಯತ್ನಾಳ್’ಗೆ ಶಿಸ್ತು ಸಮಿತಿ ಮೂಲಕ ನೋಟಿಸ್

ಮುಖ್ಯಮಂತ್ರಿ ಸ್ಥಾನಕ್ಕೆ 2500 ಕೋಟಿ ಹೇಳಿಕೆ: ಯತ್ನಾಳ್’ಗೆ ಶಿಸ್ತು ಸಮಿತಿ ಮೂಲಕ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಖ್ಯಮಂತ್ರಿ ಸ್ಥಾನ ನೀಡಲು ನನಗೆ 2500 ಕೋಟಿ. ರೂ ಹಣ ಕೇಳಿದ್ದಾಗಿ ಆರೋಪಿಸಿದ್ದರು. ಯತ್ನಾಳ್ ಹೇಳಿಕೆಯು ಬಿಜೆಪಿಯಲ್ಲೇ ಇರಿಸುಮುರಿಸು ಉಂಟಾಗಿತ್ತು. ಇದೀಗ ಯತ್ನಾಳ್ ಹೇಳಿಕೆ ಬಿಜೆಪಿ ಹೈಕಮಾಂಡ್ ಅಂಗಳ ಪ್ರವೇಶಿಸಿದ್ದು, ತನ್ನ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಯತ್ನಾಳ್ ಅವರಿಗೆ ನೋಟಿಸ್ ನೀಡಿ ತಮ್ಮ ಹೇಳಿಕೆಯ ಕುರಿತು ವಿವರಣೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಯತ್ನಾಳ್ ಹೇಳಿಕೆಯನ್ನು ಪಕ್ಷದ ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ತರಲಾಗಿದ್ದು, ವರಿಷ್ಠರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಅವರಿಂದ ಪರಿಪೂರ್ಣ ವಿವರಣೆ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕಟೀಲ್ ತಿಳಿಸಿದ್ದಾರೆ.

ಈ ಹಿಂದೆ ಅನಗತ್ಯ ಹೇಳಿಕೆ ನೀಡಿದ್ದ ಯತ್ನಾಳ್’ಗೆ ಈವರೆಗೆ ಎರಡು ಬಾರಿ ನೋಟಿಸ್ ಕೊಟ್ಟು, ವಿವರಣೆ ಪಡೆದುಕೊಳ್ಳಲಾಗಿತ್ತು. ಈ ಬಾರಿಯೂ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡುತ್ತೇವೆ, ಉತ್ತರ ಬಂದ ನಂತರ ಕ್ರಮ ಜರುಗಿಸಲಾಗುತ್ತದೆ. ಬಿಜೆಪಿಯಲ್ಲಿ ದೊಡ್ಡವರು, ಸಣ್ಣವರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರೂ ಶಿಸ್ತು ಸಮಿತಿಯ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ನಳಿನ್ ಹೇಳಿದ್ದಾರೆ.

Join Whatsapp
Exit mobile version