ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ: ಹೆಚ್’ಡಿಕೆ

Prasthutha|

ದೇವನಹಳ್ಳಿ: ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ ಬಂದ್ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

- Advertisement -


ಮಂಡ್ಯ ಬಂದ್ ವಿಚಾರ ಕುರಿತು ಮಾತನಾಡಿದ ಅವರು, ನಾನು ಸಹ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಬೆಂಬಲ ಕೊಟ್ಟಿದ್ದೇವೆ. ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ. ಅಮಿತ್ ಶಾ ಜೊತೆ ಕಾವೇರಿ ವಿವಾದದ ಬಗ್ಗೆ ಚರ್ಚೆ ಮಾಡಿದ್ದೇನೆ. ಕಾವೇರಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ನೀರಾವರಿ ವಿಚಾರದಲ್ಲಿ ಆಗಿರುವ ಸಮಸ್ಯೆಗಳಿಗೆ ಮೈತ್ರಿಯಿಂದ ಶಾಶ್ವತ ಪರಿಹಾರ ತರುವ ಸಂಕಲ್ಪ ಹೊಂದಿದ್ದೇವೆ ಎಂದು ಹೇಳಿದರು.

Join Whatsapp