ರಾಹುಲ್ ಗಾಂಧಿ ಅನರ್ಹತೆ: ಎಲ್ಲರಿಗೂ ಒಂದೇ ಕಾನೂನು ಎಂದ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -


ಅವರು ಇಂದು ಮಾಧ್ಯಮದವರಿಗೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ . ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ.

ವಿರೋಧ ಪಕ್ಷದದವರನ್ನು ಚುನಾವಣೆಯಲ್ಲಿ ಸೋಲಿಸಬೇಕು ಅಥವ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂಧನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ ಎಂದರು.

- Advertisement -


ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರಲ್ಲರೂ ಪ್ರಕರಣ ದಾಖಲಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದರು.


ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅದರಲ್ಲಿ ಹೊಸತನವೇನಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.



Join Whatsapp