Home ಟಾಪ್ ಸುದ್ದಿಗಳು ಅಜಿತ್ ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

ಅಜಿತ್ ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿರುವ ಅಜಿತ್ ಪವಾರ್ ವಿರುದ್ಧ ಸ್ಪೀಕರ್ ರಾಹುಲ್ ನಾರ್ವೇಕರ್ ಗೆ ಅನರ್ಹತೆ ಅರ್ಜಿ ಸಲ್ಲಿಕೆಯಾಗಿದೆ.


ಅಜಿತ್ ಪವಾರ್ ಹಾಗೂ 9 ಶಾಸಕರ ವಿರುದ್ಧ ಎನ್ಸಿಪಿ ಪಕ್ಷವು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಯಂತ್ ಪಾಟೀಲ್ ತಿಳಿಸಿದ್ದಾರೆ. ಶರದ್ ಪವಾರ್ ಅವರ ಸೂಚನೆಯ ನಂತರ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲಾ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ದೃಢವಾಗಿ ನಿಂತಿದ್ದಾರೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ತಿಳಿಸಿದೆ.

Join Whatsapp
Exit mobile version