ಬೆಂಗಳೂರು: ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಅವರನ್ನು ಅನರ್ಹಗೊಳಿಸುವಂತೆ ಬಿಜೆಪಿ ಕಾರ್ಯಕರ್ತರೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಓಲೆಕಾರ್ ಅವರನ್ನು ಅನರ್ಹಗೊಳಿಸುವಂತೆ ಬಿಜೆಪಿ ಮುಖಂಡ ಸಂತೋಷ್ ರೆಡ್ಡಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ನೆಹರೂ ಓಲೆಕಾರ್ ವಿರುದ್ದ ಶಿಕ್ಷೆ ಪ್ರಕಟವಾಗಿದೆ. ಆದರೂ ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ. ನೆಹರು ಓಲೆಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.