Home ಟಾಪ್ ಸುದ್ದಿಗಳು ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ: ಸಚಿವ ಸಂಪುಟ ವಿಸ್ತರಿಸುವಂತೆ ರೇಣುಕಾಚಾರ್ಯ ಪಟ್ಟು

ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ: ಸಚಿವ ಸಂಪುಟ ವಿಸ್ತರಿಸುವಂತೆ ರೇಣುಕಾಚಾರ್ಯ ಪಟ್ಟು

ದಾವಣಗೆರೆ: ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟದಲ್ಲಿ ಈಗ 4 ಸಚಿವ ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ರಾಜೀನಾಮೆ ನೀಡಲಿ. ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾರ್ಚ್‌ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಈ ಎಲ್ಲ ವಿಚಾರವನ್ನು ಶಾಸಕ ಯತ್ನಾಳ್ ಜತೆ ಮಾತಾಡಿದ್ದೇನೆ. ವಿಳಂಬ ಮಾಡಿ ನಮಗೆ ಸಚಿವ ಸ್ಥಾನ ಕೊಟ್ಟರೆ ಉಪಯೋಗವಿಲ್ಲ. ಬಿ.ವೈ. ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Join Whatsapp
Exit mobile version