Home ಟಾಪ್ ಸುದ್ದಿಗಳು ಅಸ್ಸಾಂ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ |ಮಾಜಿ ಡೆಪ್ಯೂಟಿ ಸ್ಪೀಕರ್ ಸೇರಿದಂತೆ ಹದಿನೈದು ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ...

ಅಸ್ಸಾಂ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ |ಮಾಜಿ ಡೆಪ್ಯೂಟಿ ಸ್ಪೀಕರ್ ಸೇರಿದಂತೆ ಹದಿನೈದು ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧೆ

ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಮಾಜಿ ಡೆಪ್ಯೂಟಿ ಸ್ಪೀಕರ್ ಸೇರಿದಂತೆ ಹದಿನೈದು ನಾಯಕರು ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ. ಆದರೆ, ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಎಲ್ಲಾ ಹದಿನೈದು ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಅಸ್ಸಾಂ ಬಿಜೆಪಿ ಹೇಳಿದೆ.

ಸ್ವತಂತ್ರರಾಗಿ ಸ್ಪರ್ಧಿಸಲಿರುವ ಮಾಜಿ ಡೆಪ್ಯುಟಿ ಸ್ಪೀಕರ್ ದಿಲೀಪ್ ಕುಮಾರ್ ಪಾಲ್ ಸೇರಿದಂತೆ ನಾಯಕರನ್ನು ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ದಿಲೀಪ್ ಕುಮಾರ್ ಪಾಲ್ ಸಿಲ್ಚಾರ್ ಕ್ಷೇತ್ರದಿಂದ ಸ್ವತಂತ್ರರಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಅವರಿಗೆ ಬಿಜೆಪಿ ಸೀಟು ನಿರಾಕರಿಸಿತ್ತು.

ಶೀಘ್ರದಲ್ಲೇ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಪಕ್ಷದ ಅಸ್ಸಾಂ ಮುಖ್ಯಸ್ಥ ರಂಜಿತ್ ಕುಮಾರ್ ದಾಸ್ ಅಂಗೀಕರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್‌ದೀಪ್ ರಾಯ್ ತಿಳಿಸಿದ್ದಾರೆ. ರಾಜ್ಯದ 126 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಇತರ ಸ್ಥಾನಗಳಿಗೆ ಅಸ್ಸಾಂ ಗಣ ಪರಿಷತ್ ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಸ್ಪರ್ಧಿಸಲಿದೆ.

Join Whatsapp
Exit mobile version