ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ಪುಸ್ತಕ ವಿತರಣೆ

Prasthutha|

ಮಂಗಳೂರು: ಶಿಕ್ಷಣ ಪ್ರೋತ್ಸಾಹ ನೀಡುವುದರಿಂದ ಮನುಷ್ಯನ ಮುಂದಿನ ಜೀವನಕ್ಕೆ ದಾರಿ ತೋರಿದಂತಾಗುತ್ತದೆ,‌ ಈ ಹಿನ್ನೆಲೆಯಲ್ಲಿ ಅನ್ನದಾನಕ್ಕಿಂತಲೂ ವಿದ್ಯಾದಾನ ಮಹತ್ವದ್ದಾಗಿದೆ ಎಂದು ಕರ್ನಾಟಕ ಸರ್ಕಾರದ ನೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್ ಹೇಳಿದರು.

- Advertisement -


ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಶನಿವಾರ ಸಂಘದ ಸಭಾಂಗಣದಲ್ಲಿ ನಡೆದ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಇತರ ಮೀನುಗಾರಿಕಾ ಸಂಘಗಳಿಗಿಂತಲೂ ವೇಗವಾಗಿ ಅಭಿವೃದ್ಧಿ ಕಂಡಿರುವ ಅಲ್ಪಸಂಖ್ಯಾತ ಮೀನುಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನು ರಫ್ತು ಘಟಕ ಸ್ಥಾಪನೆಗೆ ಯೋಜನೆ ರೂಪಿಸಿದರೆ ಕರಾವಳಿ ಮೀನುಗಾರರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.


ಸಂಘದ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್ ಮಾತನಾಡಿ, ಸಂಘದ ಆಶ್ರಯದಲ್ಲಿ ಪ್ರತಿವರ್ಷ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಕಾಯಿಲೆ ಪೀಡಿತರಿಗೆ ಧನಸಹಾಯ, ಕರೊನಾ ಸಂದರ್ಭ ಪಡಿತರ ಕಿಟ್ ವಿತರಣೆ, ನೊಂದ ಮೀನುಗಾರ ಕುಟುಂಬಕ್ಕೆ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

- Advertisement -


ಕಾರ್ಯಕ್ರಮದಲ್ಲಿ ಸಂಘದ ಪರವಾಗಿ ಸಂಘದ ಅಧ್ಯಕ್ಷ ಜೆ.ಮಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಬ್ದುಲ್ ಲತೀಫ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ.ಇಬ್ರಾಹಿಂ, ಟಿ.ಎಚ್.ಹಮೀದ್, ಸೂದತ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ.ಮುಹಮ್ಮದ್ ಇಬ್ರಾಹಿಂ, ಬಿ.ಕೆ.ರಜಿಯಾ ಮೊದಲಾದವರು ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Join Whatsapp