Home ಟಾಪ್ ಸುದ್ದಿಗಳು ಮಂಗಳೂರು: 30 ಮಂದಿ ವಿಕಲಚೇತನರಿಗೆ ಸ್ಕೂಟರ್ ವಿತರಣೆ

ಮಂಗಳೂರು: 30 ಮಂದಿ ವಿಕಲಚೇತನರಿಗೆ ಸ್ಕೂಟರ್ ವಿತರಣೆ

ಮಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.

ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ಮಂದಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸಚಿವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ಕುಮಾರ್ ರೈ, ವೇದವ್ಯಾಸ ಕಾಮತ್, ಐವನ್ ಡಿಸೋಜಾ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

Join Whatsapp
Exit mobile version