ಕೋಲಾರ ಬಂದ್ ನೆಪದಲ್ಲಿ ಗಲಭೆ ಸೃಷ್ಟಿಯಾದರೆ ಜಿಲ್ಲಾಡಳಿತವೇ ನೇರ ಹೊಣೆ: ಪಾಪ್ಯುಲರ್ ಫ್ರಂಟ್

Prasthutha|

ಕೋಲಾರ: ಅಶಾಂತಿ ಹರಡುವ ದುರುದ್ದೇಶದಿಂದ ಸಂಘಪರಿವಾರವು ಕೋಲಾರ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಗಲಭೆ ನಡೆದು ಯಾವುದೇ ಅಹಿತಕರ ಘಟನೆ ನಡೆದರೂ ಇದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾದ ಜಾಫರ್ ಸಾದಿಕ್ ಎಚ್ಚರಿಸಿದ್ದಾರೆ.

- Advertisement -

ಕಳೆದ ಮೂರು ದಿನಗಳ ಹಿಂದೆ ದತ್ತಪೀಠಕ್ಕೆ ಹೊರಟಿದ್ದ ಬಸ್ಸಿನಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು ಪಟ್ಟಣದ ಎಂ.ಬಿ.ರೋಡ್ ಸಮೀಪದ ಮುಸ್ಲಿಮ್ ಬಾಹುಳ್ಯ ಪ್ರದೇಶದಲ್ಲಿ ಹಾದು ಹೋಗುವಾಗ ಉದ್ದೇಶಪೂರ್ವಕವಾಗಿ  ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಾ ಗಲಭೆಗೆ ಪ್ರಚೋದನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿ ನಡೆದ ಬಸ್ ಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಮಂದಿಯ ಬಂಧನ ನಡೆದಿದೆ. ಈ ಮಧ್ಯೆ, ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ಘಟನೆಗೆ ಸಂಬಂಧವೇ ಇಲ್ಲದ ನೂರಕ್ಕೂ ಅಧಿಕ ಮಂದಿ ಮುಸ್ಲಿಮರ ವಿರುದ್ಧ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿರುವುರುವುದನ್ನು ಅವರು ಖಂಡಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪೊಲೀಸರು ಕ್ರಮ ಕೈಗೊಂಡಿದ್ದರೂ ಸಂಘಪರಿವಾರವು ಸಂಘಪರಿವಾರದ ಕಾರ್ಯಕರ್ತರು ಇಂದು ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಾ ರಾಲಿ ನಡೆಸಿ ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಾಳೆ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಇಲ್ಲಿನ ಶಾಂತಿ ಕದಡಿದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ, ಪೊಲೀಸರು ಮುಸ್ಲಿಮರ ವಿರುದ್ಧ ತಾರಮತ್ಯ ಧೋರಣೆ ಅನುಸರಿಸುತ್ತಿದ್ದಾರೆ. ಇದೀಗ ಗಲಭೆ ಹರಡುವ ದುರುದ್ದೇಶದಿಂದ ನಡೆಸುವ ಬಂದ್ ವಿರುದ್ಧ ಕ್ರಮ ಕೈಗೊಳ್ಳುವ ಯಾವುದೇ ಸೂಚನೆಯನ್ನು ಆಡಳಿತ ವರ್ಗ ನೀಡಿಲ್ಲ. ಒಂದು ವೇಳೆ ಬಂದ್ ನೆಪದಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಅದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ಜಾಫರ್ ಸಾದಿಕ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

Join Whatsapp