Home ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂ ಹಿಂಪಡೆದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿ ಕರ್ಫ್ಯೂ ಹಿಂಪಡೆದ ಜಿಲ್ಲಾಧಿಕಾರಿ

ಮಂಗಳೂರು : ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ರಾತ್ರಿ ಕರ್ಫ್ಯೂವನ್ನು ಹಿಂಪಡೆದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ ಬೆನ್ನಲ್ಲೇ ದ.ಕ ಜಿಲ್ಲೆಯಲ್ಲಿಯೂ ಆದೇಶ ಜಾರಿಗೊಳಿಸಲಾಗಿದೆ.

ಸದ್ಯ ದ.ಕ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಸಂಪೂರ್ಣವಾಗಿ ಹಿಂಪಡೆದಿರುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version