‘ಸೇನಾ ವೇಷ ಧರಿಸುವುದು ಶಿಕ್ಷಾರ್ಹ ಅಪರಾಧ’: ಮೋದಿಗೆ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ

Prasthutha|

- Advertisement -

ಲಕ್ನೋ: ನರೇಂದ್ರ ಮೋದಿ ಸೈನಿಕನ ‘ವೇಷ’ ಧರಿಸಿದ್ದಕ್ಕಾಗಿ ಉತ್ತರ ಪ್ರದೇಶದ ನ್ಯಾಯಾಲಯವೊಂದು ಪ್ರಧಾನಿ ಕಾರ್ಯಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ಸೇನೆಯ ವೇಷ ಧರಿಸಿದ್ದಕ್ಕಾಗಿ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯ ಪ್ರಧಾನಿಗೆ ನೋಟಿಸ್ ಜಾರಿ ಮಾಡಿದೆ.

- Advertisement -

ಕಳೆದ ವರ್ಷ ಮೋದಿ ಕಾಶ್ಮೀರದಲ್ಲಿ ಸೇನಾ ಸಮವಸ್ತ್ರದಲ್ಲಿ ದೀಪಾವಳಿ ಆಚರಿಸಿದ್ದರು. ಸೈನಿಕರಲ್ಲದವರು ಮಿಲಿಟರಿ ಸಮವಸ್ತ್ರ ಅಥವಾ ಟೋಕನ್ ಸೇರಿದಂತೆ ಚಿಹ್ನೆಗಳನ್ನು ಧರಿಸುವುದು ಶಿಕ್ಷಾರ್ಹ ಅಪರಾಧ ಎಂದು ಆರೋಪಿಸಿ ರಾಕೇಶ್ ನಾಥ್ ಪಾಂಡೆ ಎಂಬ ವಕೀಲರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ಸೇನೆಯ ವೇಷ ಧರಿಸಿದ್ದಕ್ಕಾಗಿ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯ ಪ್ರಧಾನಿಗೆ ನೋಟಿಸ್ ಜಾರಿ ಮಾಡಿದೆ.

2016ರಿಂದ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದು, 2017 ರಿಂದ ಮಿಲಿಟರಿ ಸಮವಸ್ತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

Join Whatsapp