ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.11ರಂದು ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿ, ನೀಡುತ್ತಿರುವ ಚಿಕಿತ್ಸೆ ಕುರಿತು ರೋಗಿಗಳೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.